RNI NO. KARKAN/2006/27779|Thursday, July 31, 2025
You are here: Home » breaking news » ಗೋಕಾಕ:ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗುವದು

ಗೋಕಾಕ:ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗುವದು 

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗುವದು

 
ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಜೂ 23 :

 

 

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ ಹಾಗೂ ಅವರ ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವ ಹಾಗೂ ಅವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ಶುಕ್ರವಾರ ಜೂನ್.21 ರಂದು ಕೊಳವೆ ಭಾಂವಿ ಕೊರೆಯುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ, ಈಶ್ವರ ಬಳಿಗಾರ, ಶಿವಾಜಿ ನೀಲಣ್ಣವರ, ಶ್ರೀಶೈಲ ಗಾಣಗಿ, ವಿಠಲ ಕೋಣಿ, ಶಿವನಪ್ಪ ಮಾಳೇದ, ಮುಖ್ಯಾಧ್ಯಾಪಕ ರಮೇಶ ಅಳಗುಂಡಿ, ಪುಂಡಲೀಕ ಹಾಲಣ್ಣವರ, ಬಸವರಾಜ ಪಣದಿ, ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ವಿಠಲ ಚಂದರಗಿ, ರಾಮಣ್ಣ ದಂಡಿನ, ಶಾಲೆಯ ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು, ಇತರರು ಇದ್ದರು.

Related posts: