ಗೋಕಾಕ:ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಸೆ 9:
ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ನಗರದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢ ಶಾಲಾ ಬಾಲಕರ ವಿಭಾಗದದಲ್ಲಿ ಶೆಟಲ್ ಬ್ಯಾಟಮಿಟನ್ ಮತ್ತು ಪುಟಬಾಲ್, ಬಾಲಕಿಯರ ವಿಭಾಗದಲ್ಲಿ ಹ್ಯಾಂಡ್‍ಬಾಲ್ ಹಾಗೂ ಬಾಸ್ಕೆಟ್‍ಬಾಲ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಚೇರಮನ್ ಲಖನ್ ಜಾರಕಿಹೊಳಿ, ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ಶಿಕ್ಷಕ ಎಮ್.ಸಿ.ವಣ್ಣೂರ, ದೈಹಿಕ ಶಿಕ್ಷಕರಾದ ಎ.ಎಸ್.ಸಾಮಂತ, ಕಿರಣ ಶೇಬಣ್ಣವರ ಹಾಗೂ ಶಿಕ್ಷಕರು ಸಿಬ್ಬಂದಿಯವರು ಅಭಿನಂದಿಸಿದ್ದಾರೆ.