ಗೋಕಾಕ:ಶಿಕ್ಷಣಾಧಿಕಾರಿ ಬಳಗಾರ, ತಾ.ಪಂ ಅಧಿಕಾರಿ ಹೆಗ್ಗನಾಯಿಕ ವರ್ಗಾವಣೆಗೆ ಶಾಸಕ ಸತೀಶ ಜಾರಕಿಹೊಳಿ ಒತ್ತಾಯ

ಶಿಕ್ಷಣಾಧಿಕಾರಿ ಬಳಗಾರ, ತಾ.ಪಂ ಅಧಿಕಾರಿ ಹೆಗ್ಗನಾಯಿಕ ವರ್ಗಾವಣೆಗೆ ಶಾಸಕ ಸತೀಶ ಜಾರಕಿಹೊಳಿ ಒತ್ತಾಯ
ನಮ್ಮ ಬೆಳಗಾವಿ ಇ -ವಾರ್ತೆ , ಗೋಕಾಕ ಅ 10 :
ಗೋಕಾಕ್ ಉಪಚುನಾವಣೆ ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲಿ ಎನ್ನುವ ನಿಟ್ಟಿನಲ್ಲಿ ಅಲ್ಲಿಯ ಕೆಲ ಅಧಿಕಾರಿಗಳನ್ನು ಕೂಡಲೇ ಬೇರೆ ಜಿಲ್ಲೆಗಳಿಗೆ ವರ್ಗ ಮಾಡುವಂತೆ ಆಗ್ರಹಿಸಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಖುದ್ದು ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ, ಡಿಸೆಂಬರ್ ನಲ್ಲಿ ನಡೆಯಲಿರುವ ಗೋಕಾಕ್ ಉಪಚುನಾವಣೆ ನಿಷ್ಪಕ್ಷಪಾತವಾಗಿ ನಡೆಯಲಿ. ಈ ಹಿನ್ನೆಲೆ ಗೋಕಾಕ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಹೆಗ್ಗನಾಂಯಿಕ್, ಗೋಕಾಕ್ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ ಬಳೆಗಾರ್, ಗೋಕಾಕ್ ತಾಲೂಕು ಪಂಚಾಯತ್ ನ ಪ್ರಭಾರಿ ಸಹಾಯಕ ನಿರ್ದೇಶಕ ಎಸ್.ಎಚ್ ದೇಸಾಯಿ ಹಾಗೂ ಅಂಕಲಗಿಯ ಗ್ರಾಮ ಲೆಕ್ಕಾಧಿಕಾರಿ ಶಿವಾನಂದ್ ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದು, ಚುನಾವಣೆ ಅಕ್ರಮ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಬೇರೆ ಬೇರೆ ಜಿಲ್ಲೆಗಳಿಗೆ ಇವರನ್ನು ವರ್ಗಾಯಿಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು ಸತೀಶ ಜಾರಕಿಹೊಳಿ ಅವರ ಈ ಮನವಿಗೆ ಸ್ಪಂದಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.