RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ : ಹೊಸೂರ ಗ್ರಾಮದಲ್ಲಿ ಘಟನೆ

ಗೋಕಾಕ:ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ : ಹೊಸೂರ ಗ್ರಾಮದಲ್ಲಿ ಘಟನೆ 

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ : ಹೊಸೂರ ಗ್ರಾಮದಲ್ಲಿ ಘಟನೆ

ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಅ 20 -: 

ಗೋಕಾಕ ತಾಲೂಕಿನಲ್ಲಿ ಹೊಸೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಶನಿವಾರ ಸಂಜೆ 7 ಗಂಟೆಗೆ ನಡೆದಿದೆ.

ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿದ ಬಳಿಕ, ಪತಿ-ಪತಿ ಇಬ್ಬರೂ ಒಂದೇ ಹಗ್ಗಕ್ಕೆ ನೇಣು ಹಾಕಿಕೊಂಡಿದ್ದಾರೆ.

ಭೀಮಪ್ಪ ಸಿದ್ದಪ್ಪ ಚೂನಪ್ಪಗೋಳ(30), ಮಂಜುಳ ಚೂನಪ್ಪಗೋಳ(25), ಪ್ರದೀಪ (8) ಮೋಹನ(6) ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಭೀಮಪ್ಪ ಸಿಂಡಿಕೇಟ್ ಬ್ಯಾಂಕಿನಲ್ಲಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನೆಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತನ್ನ ಇಬ್ಬರು ಪುತ್ರರಾದ ಪ್ರದೀಪ ಮತ್ತು ಮೋಹನ್ ಇಬ್ಬರನ್ನು ನೇಣು ಹಾಕಿದ್ದು, ಬಳಿಕ ಪತಿ-ಪತ್ನಿ ಸಾವನ್ನಪ್ಪಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಈ ನಾಲ್ವರ ಏಕಾಏಕಿ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts: