RNI NO. KARKAN/2006/27779|Wednesday, January 14, 2026
You are here: Home » breaking news » ಬೆಳಗಾವಿ:ಬಸವಣ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ:ಬಸವಣ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ 

ಬಸವಣ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ ಜು 30:  ಬಸವೇಶ್ವರರ ಬಗ್ಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜದ ಅಂಕುಡೊಂಕುಗಳನ್ನು ವಚನಗಳ ಮೂಲಕ ತಿದ್ದಲು ಹೊರಟ ಮಹಾನ್ ಮಹಾನವತಾವಾದಿ ಬಸವೇಶ್ವರರು ಕೊನೆಗೆ ಏನಾದರು…? ಬಸವಣ್ಣನವರು ಆತ್ಮಹತ್ಯೆ ಮಾಡಿಕೊಂಡರು ಅಂತ ಹೇಳಿಕೆ ನೀಡಿದ್ದಾರೆ.

ಅವರು ಈ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ಗೆ ಮುಜುಗರ ತಂದಿಟ್ಟಿದ್ದಾರೆ.ಅಲ್ಲದೇ ಬಸವಣ್ಣನವರ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ಗೆ ಈ ಹೇಳಿಕ ನೀಡಿದ ಬೆನ್ನಲ್ಲೇ, ಬಸವದಳದ ಕಾರ್ಯಕರ್ತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಇನ್ನು ಬಸವೇಶ್ವರರು ಆತ್ಮಹತ್ಯೆ ಮಾಡಿಕೊಂಡಿದ್ದರು ಅಂತಾ ಹೇಗೆ ಹೇಳಿದ್ರು ಅಂತಾ ಬಸವದಳದ ಕಾರ್ಯಕರ್ತರು ತರಾಟೆಗೆ ತಗೊಂಡ್ರು. ಇದೇ ಸಂದರ್ಭದಲ್ಲಿ ಹೆಬ್ಬಾಳ್ಕರ್ ತಮ್ಮ ಮಾತನ್ನು ಸಮರ್ಥಿಸಿಕೊಂಡು ಅಲ್ಲಿಂದ ಹೊರಟು ಹೋದರು

Related posts: