ಗೋಕಾಕ: ಶನಿವಾರ 23 ರಂದು ಸಂಜೆ 5 ಗಂಟೆಗೆ ಗೋಕಾಕ ನಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ : ಶಶಿಧರ ದೇಮಶೆಟ್ಟಿ ಮಾಹಿತಿ

ಶನಿವಾರ 23 ರಂದು ಸಂಜೆ 5 ಗಂಟೆಗೆ ಗೋಕಾಕ ನಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ : ಶಶಿಧರ ದೇಮಶೆಟ್ಟಿ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 22 :
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶನಿವಾರ 23 ರಂದು ಸಂಜೆ 5 ಗಂಟೆಗೆ ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ.
ಅಂದು ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪ್ರಚಾರಾರ್ಥ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಯನ್ನುದ್ಧೇಶಿಸಿ ಮಾತನಾಡಲಿದ್ದಾರೆ.
ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಲಕ್ಷö್ಮಣರಾವ್ ಜಾರಕಿಹೊಳಿ, ಕೇಂದ್ರ ರೈಲ್ವೇ ರಾಜ್ಯ ಸಚಿವ ಸುರೇಶ ಅಂಗಡಿ, ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರದ ಉಸ್ತುವಾರಿ ಹಾಗೂ ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ(ನಡಹಳ್ಳಿ) ಸೇರಿದಂತೆ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬೆಳಗಾವಿ(ಗ್ರಾ) ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ವಿವಿಧ ಹಂತದ ಪದಾಧಿಕಾರಿಗಳು ಉಪಸ್ಥಿತರಿರುವರು.
ನ.23ರಂದು ಬೆಳಿಗ್ಗೆ 11 ಗಂಟೆಗೆ ಅಥಣಿ, ಮ. 3 ಗಂಟೆಗೆ ಕಾಗವಾಡದಲ್ಲಿ ಬಹಿರಂಗ ಸಭೆ ಮುಗಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಂಜೆ 5 ಗಂಟೆಗೆ ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಗ್ರಾಮೀಣ ಘಟಕದ ಅಧ್ಯಕ್ಷ ವಿರುಪಾಕ್ಷ ಯಲಿಗಾರ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.