ಗೋಕಾಕ:ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಬಿರುಸಿನ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಬಿರುಸಿನ ಪ್ರಚಾರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 24 :
ಮತದಾನದ ದಿನ ಸಮೀಪಿಸುತ್ತಿದ್ದಂತೆ ಗೋಕಾಕ್ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ತಮ್ಮ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ.
ಅಧಿಕೃತವಾಗಿ ಕೈ ಹುರಿಯಾಳಾಗಿ ಕಣಕ್ಕೀಳಿದ ನಂತರ ತಮ್ಮ ಪ್ರಚಾರ ಕಾರ್ಯಕ್ಕೆ ವೇಗ ಕೊಟ್ಟಿರುವ ಲಖನ್, ನಿತ್ಯ ಕ್ಷೇತ್ರದ ಹಳ್ಳಿ-ಹಳ್ಳಿಗಳಿಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾರೆ.
ಇಂದು ಹಿರೇನಂದಿ, ಚಿಕ್ಕನಂದಿ, ಬೆನಚಿನಮರಡಿ, ಕೊಳವಿ ಹಾಗೂ ಪಂಚನಾಯಕನಹಟ್ಟಿ ಗ್ರಾಮಗಳಿಗೆ ಭೇಟಿ ನೀಡಿದ ಲಖನ್, ಕಾಂಗ್ರೆಸ್ ಗೆ ಮತ ನೀಡಿ ತಮ್ಮನ್ನು ಗೆಲ್ಲಿಸುವಂತೆ ಕೇಳಿಕೊಂಡರು.
ಇನ್ನು ಲಖನ್ ಪ್ರಚಾರಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಭೇಟಿ ನೀಡಿದ ಪ್ರತಿ ಹಳ್ಳಿಗಳಲ್ಲಿಯೂ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಇಂದು ಮತಬೇಟೆ ನಡೆಸಿದ ಗ್ರಾಮಗಳಲ್ಲಿಯೂ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.