ಗೋಕಾಕ:ಕಾಂಗ್ರೆಸ್ ಅಭ್ಯರ್ಥಿ ಲಖನ್ ಪರ ಪತ್ನಿ ಸಂಧ್ಯಾ ಜಾರಕಿಹೊಳಿ ಬಿರುಸಿನ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಲಖನ್ ಪರ ಪತ್ನಿ ಸಂಧ್ಯಾ ಜಾರಕಿಹೊಳಿ ಬಿರುಸಿನ ಪ್ರಚಾರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 29 :
ಇನ್ನೇನು ಉಪ ಚುನಾವಣೆಗೆ ಕೆಲವೇ ಕೆಲ ದಿನಗಳು ಬಾಕಿ ಇವೆ.15 ಕ್ಷೇತ್ರಗಳಲ್ಲಿ ರಾಜಕಿಯ ನಾಯಕರು ಇನ್ನಿಲ್ಲದ ಪ್ರಚಾರ ಮಾಡುತ್ತಿದ್ದಾರೆ. ಆದರೆ ಗೋಕಾಕದಲ್ಲಿ ಪತಿಯ ಪರ ಪತ್ನಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಂದು ಹೆಣ್ಣಿರುತ್ತಾಳೆ ಅನ್ನೋದು ನಾಣ್ಣುಡಿ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಅಂದರೆ ಬೆಳಗಾವಿ ಜಿಲ್ಲೆ ಗೋಕಾಕ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪತ್ನಿ ನೇರ ಸಾಕ್ಷಿಯಾಗಿದ್ದಾರೆ. ಪತಿಯ ರಾಜಕೀಯ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಗುರುವಾರದಂದು ನಗರದ ಕಿಲ್ಲಾ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪತ್ನಿ ಶ್ರೀಮತಿ ಸಂಧ್ಯಾ ಲಖನ್ ಜಾರಕಿಹೊಳಿ ಅವರು ಬಿರುಸಿನ ಪ್ರಚಾರ ಕೈಗೊಂಡರು
ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಅಭಿವೃದ್ಧಿ ದೃಷ್ಠಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ಈ ಬಾರಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಅವರನ್ನು ಆರ್ಶಿವದಿಸಿ ತಮ್ಮ ಸೇವೆ ಮಾಡಲು ಅನುವು ಮಾಡಿಕೊಂಡುವಂತೆ ವಿನಂತಿಸಿದರು