ಗೋಕಾಕ:ಅಭಿವೃದ್ದಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ರಮೇಶ ಜಾರಕಿಹೊಳಿ

ಅಭಿವೃದ್ದಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 3 :
ನನ್ನ ಅಭಿವೃದ್ದಿ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಮತ ನೀಡಿ. ಕಳೆದ 20 ವರ್ಷಗಳ ಅವಧಿಯಲ್ಲಿ 5ಬಾರಿ ಶಾಸಕನಾಗಿ, ಎರಡು ಬಾರಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ, ಎಲ್ಲ ಸಮುದಾಯಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಮೂಲಕ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟಿದ್ದೇನೆಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರದಂದು ಗೋಕಾಕ ಮತಕ್ಷೇತ್ರದ ಗೋಕಾಕ-ಫಾಲ್ಸ್, ಮಾಣಿಕವಾಡಿ, ನಾಯಿಕವಾಡಿ, ಮರಡಿಮಠ, ಕೊಣ್ಣೂರ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದ ಅವರು, ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಗೋಕಾಕ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸಿದ್ದೇನೆಂದು ಹೇಳಿದರು.
ಡಿ-5 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೊದಲಬಾರಿ ಕಣಕ್ಕೆ ಇಳಿದಿದ್ದು, ಶೇಜ ನಂ 2 ಕಮಲ ಹೂವಿನ ಗುರುತಿಗೆ ಮತ ನೀಡಿ ಕ್ಷೇತ್ರದ ಅಭಿವೃದ್ದಿಗೆ ಆಶೀರ್ವಾದ ಮಾಡುವಂತೆ ಕೋರಿದರು.
ಮತದಾರರು ಯಾವುದೇ ಗೊಂದಲಗಳಿಗೆ ಕಿವಿಕೊಡದೇ ನಾನು ನಿಮ್ಮೊಂದಿಗೆ ಇದ್ದೇನೆ. ಈಗಾಗಲೇ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿಪರ ಕಾರ್ಯಗಳನ್ನು ಮಾಡಿದ್ದನ್ನು ತಾವು ಗಮನಿಸಿ, ಯಡಿಯೂರಪ್ಪನವರ ಕೈಗಳನ್ನು ಬಲ ಪಡಿಸಲು ನನಗೆ ಶಕ್ತಿಯಾಗಿ ನಿಂತು ಜನಸೇವೆಗೆ ಮತ್ತೊಮ್ಮೆ ಅವಕಾಶವನ್ನು ನೀಡುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಉಪಸ್ಥಿತರಿದ್ದರು.