RNI NO. KARKAN/2006/27779|Thursday, March 19, 2026
You are here: Home » breaking news » ಗೋಕಾಕ:ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ : ರಿಯಾ ವಂಟಮೂರಿಮಠ

ಗೋಕಾಕ:ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ : ರಿಯಾ ವಂಟಮೂರಿಮಠ 

ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ : ರಿಯಾ ವಂಟಮೂರಿಮಠ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 16 :

 

 

ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಹಿಂದಿನ ವಿದ್ಯಾರ್ಥಿನಿ ಹಾಗೂ ರಾಷ್ಟ್ರ ಮಟ್ಟದ ಬಾಸಕೇಟ ಬಾಲ್ ಕ್ರೀಡಾಪಟು ರಿಯಾ ವಂಟಮೂರಿಮಠ ಹೇಳಿದರು

ಸೋಮವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಗಳಲ್ಲಿಷಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಪ್ರತಿಭಾನ್ವಿತರಾಗಿರೆಂದು ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇನ್ನೋರ್ವ ಕ್ರೀಡಾಪಟು ಮಧುಶ್ರೀ ಹಿರೇಮಠ ಮಾತನಾಡಿ ವಿದ್ಯಾರ್ಥಿಗಳು ಸೋಲು ಗೆಲುವಿಗೆ ಮಹತ್ವ ನೀಡಿದೆ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರತಿಭೆಗಳಾಗಿ ನಾಡಿನ ಕೀರ್ತಿಯನ್ನು ಹೆಚ್ಚಿಸಿರಿ ಎಂದರು .

ವೇದಿಕೆ ಮೇಲೆ ಮುಖ್ಯೋಪಾಧ್ಯಾಯನಿ ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ.ವಣ್ಣೂರ ಇದ್ದರು. ಶಿಕ್ಷಕಿ ಎಸ್.ಎಸ್‌.ಭಂಡಾರಿ ಸ್ವಾಗತಿಸಿದರು, ಎನ್.ಕೆ ಮಕಾಂದಾರ ನಿರೂಪಿಸಿದರು, ಬಿ‌.ಬಿ.ಕೊಚ್ಚರಗಿ ವಂದಿಸಿದರು .

Related posts: