RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ : ಶಾಸಕ ರಮೇಶ ಜಾರಕಿಹೊಳಿ 

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ : ಶಾಸಕ ರಮೇಶ ಜಾರಕಿಹೊಳಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 29 :

 

 

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತಿದೆ. ನೆರೆ ಸಂತ್ರಸ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು

ರವಿವಾರ ದಂದು ನಗರದ ಶಾಸಕರ ಕಚೇರಿಯಲ್ಲಿ ಪ್ರವಾಹ ಪೀಡಿತ ಜನರ ಮನವಿ ಸ್ವೀಕರಿಸಿ ಅವರು ಮಾತನಾಡಿದರು

ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಆದಷ್ಟು ಬೇಗ ಬಾಕಿ ಉಳಿದಿರುವ ಪರಿಹಾರ ಮೊತ್ತವನ್ನು ಖಾತೆಗೆ ಜಮಮಾಡುವಂತೆ ಸೂಚಿಸಲಾಗಿದೆ. ಸಂತ್ರಸ್ತರು ಯಾವದೇ ವದಂತಿಗಳಿಗೆ ಕಿವಿಗೊಡದೆ ದೈರ್ಯವಾಗಿರಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಯಾವದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಕಂಕಣಬದ್ಧವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಅಡಿವೆಪ್ಪ ಕಿತ್ತೂರ, ಶಂಕರ್ ದರೆನ್ನವರ್, ಮಲ್ಲಪ್ಪ ದಾಸಪ್ಪಗೊಳ,ನಿಂಗಪ್ಪ ಗೋಸಬಾಳ, ಅರ್ಜುನ ಪವಾರ, ಮಾಯಪ್ಪ ತುಳಜನ್ನವರ , ಸಾಯಿನಾಥ ಶಿಂಗಳಾಪೂರ ಕಲ್ಲೋಳೆಪ್ಪ ಮದಿಹಳ್ಳಿ, ಲಕ್ಷ್ಮಣ ಮಲ್ಲಾಪೂರೆ, ಲಕ್ಷ್ಮಣ ತಳ್ಳಿ, ಶ್ರೀಶೈಲ ಬಬಲಿ ಸೇರಿದಂತೆ ಇತರರು ಇದ್ದರು

Related posts: