ಗೋಕಾಕ:ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನ: ಕರವೇ ಅಧ್ಯಕ್ಷ ಖಾನಪ್ಪನವರ ಸಂತಾಪ
ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನ: ಕರವೇ ಅಧ್ಯಕ್ಷ ಖಾನಪ್ಪನವರ ಸಂತಾಪ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ , ಜ 11:
ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ(88) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಆಸ್ಪತ್ರೆಯಲ್ಲಿ ಕೊನಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ.ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದಕ್ಕಿಸಿಕೊಳ್ಳುವಲ್ಲಿ ಚಿದಾನಂದ ಮೂರ್ತಿ ಅವರ ಹೋರಾಟ ಮತ್ತು ಶ್ರಮ ಅಳಿಸಲಾಗದ್ದು ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಎಂದು ಕರವೇ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.