RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಚಿಮೂ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ:ಚಿಮೂ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ 

ಚಿಮೂ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 11 :

 

 
ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ ಸಾಂಸ್ಕøತಿಕ ಅಧ್ಯಯನ ನಡೆಸಿದ್ದಾರೆ. ಚಿಮೂ ನಿಧನದಿಂದ ಕನ್ನಡ ನಾಡಿಗೆ ಅಪಾರ ಹಾನಿಯಾಗಿದೆ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹಭಾಗಿಯಾಗಿ ಚಿಮೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಮತ್ತು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

Related posts: