RNI NO. KARKAN/2006/27779|Tuesday, May 7, 2024
You are here: Home » breaking news » ಗೋಕಾಕ:ಬೆಟಗೇರಿ ವಿವಿಧೆಡೆ ಸಡಗರದಿಂದ ನಡೆದ 71 ನೇ ಗಣರಾಜ್ಯೋತ್ಸವ ದಿನಾಚರಣೆ

ಗೋಕಾಕ:ಬೆಟಗೇರಿ ವಿವಿಧೆಡೆ ಸಡಗರದಿಂದ ನಡೆದ 71 ನೇ ಗಣರಾಜ್ಯೋತ್ಸವ ದಿನಾಚರಣೆ 

ಬೆಟಗೇರಿ ವಿವಿಧೆಡೆ ಸಡಗರದಿಂದ ನಡೆದ 71 ನೇ ಗಣರಾಜ್ಯೋತ್ಸವ ದಿನಾಚರಣೆ

 

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜ 26 :

 

ಗ್ರಾಮದ ವಿ.ವಿ.ದಯನ್ನವರ ಸರಕಾರಿ ಪ್ರೌಢ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಧ್ವಜಾರೋಹಣ ಮಾಡಿದರು. ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಿಂದ ವಿಶೇಷ ಪರೇಡ್, ಧ್ವಜಾರೋಹಣಕ್ಕೆ ಗೌರವ ಸಮರ್ಪನೆ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಿದ ಬಳಿಕ ಸಿಹಿ ಹಂಚಲಾಯಿತು, ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಇದ್ದರು.
ನಾಗನೂರ ಸೌಹಾರ್ದ ಶಾಖೆಯಲ್ಲಿ : ಗ್ರಾಮದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಶಾಖೆಯಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಮಲ್ಲಪ್ಪ ಕಂಬಿ ಧ್ವಜಾರೋಹಣ ನೆರವೇರಿಸಿದರು. ಶಾಖಾ ವ್ಯವಸ್ಥಾಪಕ ಬಿ.ಬಿ.ಬಂಡಿ ಸೇರಿದಂತೆ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಚೈತನ್ಯ ಸೊಸಾಯಿಟಿ ಶಾಖೆಯಲ್ಲಿ : ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಿಟಿ ಲಿ, ಶಾಖೆಯಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಲಹಾ ಸಮಿತಿ ಸದಸ್ಯ ಸಣ್ಣಪ್ಪ ಐದುಡ್ಡಿ ಧ್ವಜಾರೋಹಣ ನೆರವೇರಿಸಿದರು. ಶಾಖಾ ವ್ಯವಸ್ಥಾಪಕ ವಿಠಲ ನೇಮಗೌಡ್ರ ಸೇರಿದಂತೆ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬಸವೇಶ್ವರ ಸಹಕಾರಿಯಲ್ಲಿ : ಇಲ್ಲಿಯ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಸಿಬ್ಬಂದಿ, ಗಣ್ಯರು ಇದ್ದರು.
ಚೈತನ್ಯ ಶಾಲೆ : ಗ್ರಾಮದ ಚೈತನ್ಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ದಿನಾಚರಣೆ ಜರುಗಿತು. ಶಾಲೆಯ ಸಲಹಾ ಸಮಿತಿ ಸದಸ್ಯ ಗೌಡಪ್ಪ ದೇಯಣ್ಣವರ ಧ್ವಜಾರೋಹಣ ಮಾಡಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು, ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನ ನೀಡಲಾಯಿತು. ಆಡಳಿತಾಧಿಕಾರಿ ಚಂದ್ರು ಹಾಲೊಳ್ಳಿ, ಬಸಪ್ಪ ಮೇಳೆಣ್ಣವರ, ಮುಖ್ಯ ಶಿಕ್ಷಕರು, ಶಿಕ್ಷಕರು, ಪಾಲಕರು ಇದ್ದರು.
ಕನಕಶ್ರೀ ಸಂಘ : ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಹನುಮಂತ ವಡೇರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಕಾರ್ಯನಿರ್ವಾಹಕ ರಮೇಶ ಹಾಲಣ್ಣವರ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪತ್ರೇಪ್ಪನ ತೋಟದ ಕನ್ನಡ ಶಾಲೆಯಲ್ಲಿ : ಗ್ರಾಮದ ಪತ್ರೇಪ್ಪನ ತೋಟದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ವಿಠಲ ಕೋಣಿ ಧ್ವಜಾರೋಹಣ ಮಾಡಿದರು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಿದ ಬಳಿಕ ಸಿಹಿ ಹಂಚಲಾಯಿತು, ಮುಖ್ಯಶಿಕ್ಷಕ ಬಿ.ಎ ಕೋಟಿ, ಶಿಕ್ಷಕರು, ಎಸ್‍ಡಿಎಮ್‍ಸಿ ಸದಸ್ಯರು ಇದ್ದರು.

Related posts: