RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ನೂತನ ಸಚಿವ ರಮೇಶ ಜಾರಕಿಹೊಳಿ ರವಿವಾರದಂದು ನಗರಕ್ಕೆ

ಗೋಕಾಕ:ನೂತನ ಸಚಿವ ರಮೇಶ ಜಾರಕಿಹೊಳಿ ರವಿವಾರದಂದು ನಗರಕ್ಕೆ 

ನೂತನ ಸಚಿವ ರಮೇಶ ಜಾರಕಿಹೊಳಿ ರವಿವಾರದಂದು ನಗರಕ್ಕೆ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 7 :

 

ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ.
ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ ಆಗಮಿಸಿ ಸತ್ಕಾರ ಸ್ವೀಕರಿಸಲಿದ್ದು ಅಭಿಮಾನಿ ಬಳಗದವರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: