ಬೆಟಗೇರಿ:ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರಿಂದ ಸತತ 4ನೇ ವರ್ಷದ ಪಾದಯಾತ್ರೆ
ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರಿಂದ ಸತತ 4ನೇ ವರ್ಷದ ಪಾದಯಾತ್ರೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 17 :
ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರೆಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಭಕ್ತರು ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಮಂಗಳವಾರ ಫೆ.18 ರಂದು ಮುಂಜಾನೆ 8 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ.
ಇಲ್ಲಿಯ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಪಾದಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶರಣರಾದ ಮಲ್ಲಪ್ಪ ಪಣದಿ, ಸುಭಾಷ ಕರೆಣ್ಣವರ, ಮಾಯಪ್ಪ ಬಾಣಸಿ, ಸಿದ್ದಪ್ಪ ಹೊರಟ್ಟಿ ಮುಖ್ಯತಿಥಿಗಳಾಗಿ ಆಗಮಿಸಲಿದ್ದಾರೆ.
ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸಂಚಾಲಕ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ನೇತೃತ್ವದಲ್ಲಿ ಯುವಕರು, ಪುರುಷ-ಮಹಿಳೆಯರು ಸೇರಿದಂತೆ ನೂರಾರು ಜನ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಬೆಟಗೇರಿ ಗ್ರಾಮದಿಂದ ಅಕ್ಕಿಸಾಗರ ಮಾರ್ಗವಾಗಿ ಯರಗಟ್ಟಿ, ಸವದತ್ತಿ, ಅಮ್ಮಿನಬಾವಿ, ಚಂದನಮಟ್ಟಿ ಗ್ರಾಮಗಳಲ್ಲಿ ವಾಸ್ತವ್ಯ ಮಾಡಿ, ಶುಕ್ರವಾರ ಫೆ.21 ರಂದು ಪಾದಯಾತ್ರೆ ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠ ತಲುಪಲಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಇದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಮೊಬೈಲ್ ನಂ- 9980705123, 9901139091 ಸಂಪರ್ಕಿಸಬೇಕೆಂದು ಸ್ಥಳೀಯ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.