RNI NO. KARKAN/2006/27779|Friday, February 13, 2026
You are here: Home » breaking news » ಬೆಳಗಾವಿ:ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ : ರಮೇಶ್ ಜಾರಕಿಹೊಳಿ

ಬೆಳಗಾವಿ:ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ : ರಮೇಶ್ ಜಾರಕಿಹೊಳಿ 

ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ : ರಮೇಶ್ ಜಾರಕಿಹೊಳಿ

ನಮ್ಮ ಬೆಳಗಾವಿ ಇ –  ವಾರ್ತೆ , ಬೆಳಗಾವಿ ಫೆ 22 :

ಶಾಸಕ ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ರಾಜೀನಾಮೆ ನೀಡುವುದಾಗಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಏನಾದ್ರೂ ಅನ್ಯಾಯವಾದ್ರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದ್ದಾರೆ.

ಭವಿಷ್ಯದಲ್ಲಿ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗಬಹುದು, ಒಂದು ವೇಳೆ ಅನ್ಯಾವಾದರೆ ನನ್ನ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.

Related posts: