ಗೋಕಾಕ:ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಸಕರಾರ ಬದ್ಧವಿದೆ : ಸಚಿವ ರಮೇಶ ಜಾರಕಿಹೊಳಿ
ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಸಕರಾರ ಬದ್ಧವಿದೆ : ಸಚಿವ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 23 :
ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಸರಕಾರ ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದುಪಯೋಗದಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲ ಗೋಳಿಸಿಕೋಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ರವಿವಾರದಂದು ಸಚಿವರ ಗೃಹ ಕಛೇರಿಯಲ್ಲಿ ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ 490 ಲ್ಯಾಪಟಾಫಗಳನ್ನು ವಿತರಿಸಿ ಅವರು ಮಾತನಾಡಿದರು.
ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಅತ್ಯಮೂಲ್ಯವಾದ ಸಮಯವನ್ನು ವ್ಯರ್ಥಮಾಡದೆ ವಿದ್ಯಾಭ್ಯಾಸದಲ್ಲಿ ತೊಡಗಿ ಉತ್ತಮ ಪ್ರಜೆಗಳಾಗುವತ್ತ ಗಮನ ಹರಿಸಿ ವಿದ್ಯಾರ್ಥಿ ಜೀವನವನ್ನು ಪಾವನ ಗೋಳಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಎ.ಪಿ.ಮುಲ್ಲಾ , ಬಿಇಒ ಜಿ.ಬಿ.ಬಳಗಾರ, ಸೇರಿದಂತೆ ಅನೇಕರು ಇದ್ದರು