RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಪುಟ್ಟಪ್ಪನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಖಾನಪ್ಪನವರ

ಗೋಕಾಕ:ಪುಟ್ಟಪ್ಪನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಖಾನಪ್ಪನವರ 

ಪುಟ್ಟಪ್ಪನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಖಾನಪ್ಪನವರ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮಾ 17 :

 

 
ಕರ್ನಾಟಕ ಏಕೀಕರಣದ ರೂವಾರಿ ಹಾಗೂ ಪತ್ರಕರ್ತ, ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಪಾಟೀಲ ಪುಟ್ಟಪ್ಪನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು
ಮಂಗಳವಾರದಂದು ಕರವೇ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಶೃದ್ದಾಂಜಲಿ ಸಭೆಯಲ್ಲಿ ಪಾಟೀಲ್ ಪುಟ್ಟಪ್ಪ ನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು

ಪಾಪು ಎಂದೇ ಖ್ಯಾತನಾಮರಾಗಿದ್ದ ಪಾಟೀಲ ಪುಟ್ಟಪ್ಪನವರು ಪತ್ರಕರ್ತರಾಗಿ, ಹೋರಾಟಗಾರರಾಗಿ , ಸಾಹಿತಿಯಾಗಿ ಕನ್ನಡವನ್ನು ಕಟ್ಟಿ ಬೆಳೆಸಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪುಟ್ಟಪ್ಪನವರು ಎರೆಡು ಅವಧಿಗೆ ರಾಜ್ಯಸಭೆಗೆ ಆಯ್ಕೆಯಾಗಿ ಸಂಸತ್ತಿನಲ್ಲಿಯೂ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. 46 ಕೃತಿಗಳನ್ನು ರಚಿಸಿ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಪುಟ್ಟಪ್ಪನವರು ಅಮೆರಿಕದಲ್ಲಿ ಪತ್ರಿಕೋದ್ಯಮ ಕಲಿತ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು ಇವರ ಅಗಲಿಕೆ ಕರ್ನಾಟಕಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಖಾನಪ್ಪನವರ ಕಂಬನಿ ಮೀಡಿದರು

ಈ ಸಂದರ್ಭದಲ್ಲಿ ಕರವೇ ಪಧಾಧಿಕಾರಿಗಳು ಉಪಸ್ಥಿತರಿದ್ದರ

Related posts: