RNI NO. KARKAN/2006/27779|Monday, June 16, 2025
You are here: Home » breaking news » ಬೆಟಗೇರಿ:ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಜಾಗೃತಿ

ಬೆಟಗೇರಿ:ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಜಾಗೃತಿ 

ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಜಾಗೃತಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮಾ 31 :

 

 

ಗ್ರಾಮದ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಇಲ್ಲಿಯ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹೋಮ್ ಕ್ವಾರಂಟೈನ್‍ದಲ್ಲಿರುವವರಿಗೆ ಸ್ಥಳೀಯರ ಮನೆ ಮನೆಗೆ ಹೋಗಿ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಗ್ರಾಮಕ್ಕೆ ಬೇರೆ ಕಡೆಗಳಿಂದ ಬಂದಿರುವ ಗೃಹಬಂಧನದಲ್ಲಿರುವ ಜನರ ಮನೆ ಮನೆಗೆ ಸ್ಥಳೀಯ ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಅವರು ಮಂಗಳವಾರ ಮಾ.31 ರಂದು ಭೇಟಿ ನೀಡಿ, ಹೋಮ್ ಕ್ವಾರಂಟೈನ್‍ದಲ್ಲಿರುವವರಿಗೆ ಸುಮಾರು 14 ದಿನಗಳ ಕಾಲ ಮನೆಯಿಂದ ಹೊರಗೆ ಬರಬಾರದು, ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ಆಶಾ ಕಾರ್ಯಕರ್ತರು ಪ್ರತಿ ದಿನ ಅವರ ಮನೆಗೆ ಭೇಟಿ ನೀಡಿ ಆರೋಗ್ಯದ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ಗ್ರಾಮದ ಸಾರ್ವಜನಿಕರಲ್ಲಿ ಮನವರಿಕೆ ಮಾಡುವ ಕಾರ್ಯದಲ್ಲಿ ಇಲ್ಲಿಯ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಗ್ರಾಪಂ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ನಿರತರಾಗಿದ್ದಾರೆ.

Related posts: