RNI NO. KARKAN/2006/27779|Monday, June 16, 2025
You are here: Home » breaking news » ಬೆಟಗೇರಿ:ಮನೆ ಮನೆಗೆ ಉಚಿತ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರವನ್ನು ವಿತರಣೆ

ಬೆಟಗೇರಿ:ಮನೆ ಮನೆಗೆ ಉಚಿತ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರವನ್ನು ವಿತರಣೆ 

ಮನೆ ಮನೆಗೆ ಉಚಿತ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರವನ್ನು ವಿತರಣೆ

 

 
ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಎ 3 :

 

 
ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಮದ ಪ್ರತಿ ಮನೆ ಮನೆಗೆ ಉಚಿತವಾಗಿ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರವನ್ನು ವಿತರಿಸಲಾಯಿತು

ಶುಕ್ರವಾರದಂದು ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಅವರು ಸ್ಥಳೀಯರಿಗೆ ಮಾಸ್ಕ್ ವಿತರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಶಿಕ್ಷಣದ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳು, ಕರವೇ ಗ್ರಾಮ ಘಟಕದ ಪದಾಧಿಕಾರಿಗಳು, ಟಾಸ್ಕ್ ಪೊರ್ಸ್ ಸಮಿತಿ ಸದಸ್ಯರು, ಗ್ರಾಪಂ ಸಿಬ್ಬಂದಿ ಅವರು ಇಲ್ಲಿಯ ಪ್ರತಿ ಮನೆ ಮನೆಗೆ ತೆರಳಿ ಉಚಿತವಾಗಿ ಮಾಸ್ಕ್, ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕರಪತ್ರ ವಿತರಿಸಿದರು.
ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಮಾತನಾಡಿ, ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಮುಖಕ್ಕೆ ತಪ್ಪದೇ ಮಾಸ್ಕ್ ಧರಿಸಬೇಕು ಎಂದು ಸ್ಥಳೀಯರಿಗೆ ಹೇಳಿದರು.
ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್, ಸುರೇಶ ಬಾಣಸಿ, ಕಾರ್ಯದರ್ಶಿ ಪರಸರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ, ಈರಣ್ಣ ದಂಡಿನ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಶಿಕ್ಷಣದ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳು ಕರವೇ ಗ್ರಾಮ ಘಟಕದ ಪದಾಧಿಕಾರಿಗಳು, ಟಾಸ್ಕ್ ಪೊರ್ಸ್ ಸಮಿತಿ ಸದಸ್ಯರು, ಗ್ರಾಪಂ ಸಿಬ್ಬಂದಿ, ಮತ್ತೀತರರು ಇದ್ದರು.

Related posts: