RNI NO. KARKAN/2006/27779|Tuesday, December 30, 2025
You are here: Home » breaking news » ಗೋಕಾಕ:ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು : ಎಚ್.ಎನ್.ಬಾವಿಕಟ್ಟಿ

ಗೋಕಾಕ:ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು : ಎಚ್.ಎನ್.ಬಾವಿಕಟ್ಟಿ 

ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು : ಎಚ್.ಎನ್.ಬಾವಿಕಟ್ಟಿ

 

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 9 :

 

 
ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಮತ್ತು ಸದಸ್ಯರ ನಿರ್ದೇಶದಂತೆ ಇತ್ತೀಚೆಗೆ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಕಸದ ತೊಟ್ಟಿಗಳನ್ನು ವಿತರಿಸಿ ಮಾತನಾಡಿ, ಕಸ-ಕಡ್ಡಿ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಶಾಲಾ ಮಕ್ಕಳು ಕಸದ ತೊಟ್ಟಿಗಳಲ್ಲಿ ಎಸೆದು, ಶಾಲಾ ಆವರಣವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು ಎಂದರು.
ಸ್ಥಳೀಯ ಗ್ರಾಮ ಪಂಚಾಯ್ತಿದವರು ಇಲ್ಲಿಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಸಹಾಯ, ಸಹಕಾರ ಕಾರ್ಯವನ್ನು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಈ ವೇಳೆ ಸ್ಮರಿಸಿದರು.
ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್, ಗ್ರಾಪಂ ಕಾರ್ಯದರ್ಶಿ ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಕರ ವಸೂಲಿಗಾರ ಸುರೇಶ ಬಾಣಸಿ, ಈರಣ್ಣ ದಂಡಿನ, ಶಿವಾನಂದ ಐದುಡ್ಡಿ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ, ಗ್ರಾಮಸ್ಥರು, ಇತರರು ಇದ್ದರು.

Related posts: