ಗೋಕಾಕ:ಕೊರೋನಾ ಹಿನ್ನೆಲೆ: ನಾಳೆಯಿಂದ ನಗರದಲ್ಲಿ ಪ್ರತಿ ಮನೆಮನೆಗೆ ತೆರಳಿ ವೈದ್ಯಕೀಯ ತಪಾಸಣೆ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ
ಕೊರೋನಾ ಹಿನ್ನೆಲೆ: ನಾಳೆಯಿಂದ ನಗರದಲ್ಲಿ ಪ್ರತಿ ಮನೆಮನೆಗೆ ತೆರಳಿ ವೈದ್ಯಕೀಯ ತಪಾಸಣೆ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 21 :
ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪ್ರತಿ ಮನೆಮನೆಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಲಾಗುವದು ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು
ಮಂಗಳವಾರದಂದು ನಗರದ ತಾಲೂಕಾ ಪಂಚಾಯಿತಿ ಸಭಾ ಭವನದಲ್ಲಿ ಜರುಗಿದೆ ಅಧಿಕಾರಿಗಳ ಮತ್ತು ಕೊರೋನಾ ವಾರಿಯರ್ಸ್ ರ ತರಬೇತಿ ಕಾರ್ಯಕ್ರಮ ಭಾಗವಹಿಸಿ ಮಾತನಾಡಿದ ಅವರು
ಬುಧವಾರದಿಂದ ನಗರದ ಎಲ್ಲ ವಾರ್ಡಗಳಲ್ಲಿ ವೈದ್ಯಕೀಯ ತಪಾಸಣೆ ಕಾರ್ಯ ಪ್ರಾರಂಭಗೋಳಲ್ಲಿದ್ದು, ಈ ಕಾರ್ಯ ಬರುವ 5 ದಿನಗಳ ವರೆಗೆ ನಡೆಯಲಿದೆ. ನಗರದ ವಾರ್ಡ್ ವಾರು ರಚಿಸಲಾದ ಕಾರ್ಯಪಡೆಯ ಸದಸ್ಯರು ಆಶಾ ಕಾರ್ಯಕರ್ತರೊಂದಿಗೆ ಪ್ರತಿ ಮನೆಗೆ ಬೇಟಿ ಕೊಟ್ಟು ಎಲ್ಲ ರೀತಿಯ ಅನಾರೋಗ್ಯದ ಬಗ್ಗೆ ತಪಾಸಣೆ ಮಾಡಿ ವಿವರಗಳನ್ನು ದಾಖಲಿಸಿಕೊಳ್ಳಬೇಕು
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡವು ತಪಾಸಣಾ ಕಾರ್ಯವನ್ನು ಜರುಗಿಸಲಿದ್ದು , ಸಾರ್ವಜನಿಕರು ತಪ್ಪದೆ ತಮ್ಮ ಆರೋಗ್ಯ ತಪಾಸಣೆ ಮಾಡಿಕೊಂಡು ಸಹಕರಿಸಬೇಕೆಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ವಿನಂತಿಸಿದ್ದಾರೆ
ಸಭೆಯ ಅಧ್ಯಕ್ಷತೆಯನ್ನು ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ವಹಿಸಿದ್ದರು
ಸಭೆಯಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾಂತ , ಪೌರಾಯುಕ್ತ ಶಿವಾನಂದ ಹಿರೇಮಠ, ಆರೋಗ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಉಪಸ್ಥಿತರಿದ್ದರು