RNI NO. KARKAN/2006/27779|Wednesday, January 28, 2026
You are here: Home » breaking news » ಗೋಕಾಕ:ಸರ್ಕಾರ ನೀಡಿರುವ ನಿರ್ದೇಶನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ : ಕೇಶವ ದೇವಾಂಗ

ಗೋಕಾಕ:ಸರ್ಕಾರ ನೀಡಿರುವ ನಿರ್ದೇಶನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ : ಕೇಶವ ದೇವಾಂಗ 

ಸರ್ಕಾರ ನೀಡಿರುವ ನಿರ್ದೇಶನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ : ಕೇಶವ ದೇವಾಂಗ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮೇ 30 :

 

ಮಹಾಮಾರಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ನೀಡಿರುವ ನಿರ್ದೇಶನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಆಚರಣೆಗೆ ತರಲು ಶ್ರಮಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಕರೆ ನೀಡಿದರು.
ಶನಿವಾರದಂದು ಇಲ್ಲಿಯ ಮಾರ್ಕಂಡೇಯ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಕೊರೋನಾ ವೈರಸ್ ಮಾನವನಿಂದ ಮಾನವನಿಗೆ ಬಹಳ ಸುಲಭದಲ್ಲಿ ಹರಡುವ ವೈರಸ್ ಆಗಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೇ ಇದಕ್ಕಿರುವ ಪರಿಹಾರವಾಗಿದೆ. ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬೇಕು. ಇದನ್ನು ಜಾಗೃತಿ ಮೂಡಿಸಲು ಸದಸ್ಯರು ಶ್ರಮಿಸಬೇಕೆಂದು ಹೇಳಿದರು.
ಈ ತರಬೇತಿ ಕಾರ್ಯಾಗಾರದಲ್ಲಿ ಆರೋಗ್ಯ ಇಲಾಖೆಯ ಜಯಲಕ್ಷ್ಮೀ, ಜ್ಯೋತಿ, ಪೋಲೀಸ ಇಲಾಖೆಯ ಗಂಗಾ ಸಣ್ಣಪ್ಪನ್ನವರ, ತಾಲೂಕು ಯೋಜನಾಧಿಕಾರಿ ಮಮತಾ ನಾಯಿಕ ಅವರು ಪಾಲ್ಗೊಂಡು ಮಾಹಿತಿ ನೀಡಿದರು.

Related posts: