RNI NO. KARKAN/2006/27779|Tuesday, January 13, 2026
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳಿಂದ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಆತ್ಮಿಯ ಸ್ವಾಗತ

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳಿಂದ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಆತ್ಮಿಯ ಸ್ವಾಗತ 

ಸಚಿವ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳಿಂದ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಆತ್ಮಿಯ ಸ್ವಾಗತ

 

 

ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 5 :

 

ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿ ಗೋಕಾಕ ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೂಗುಚ್ಛ ನೀಡಿ ಆತ್ಮಿಯವಾಗಿ ಅಭಿನಂದಿಸಿದರು.
ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ತಿಳಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಅವರು, ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಾಮಾಜಿಕ ವ್ಯಕ್ತಿಗತ ಅಂತರ ಕಾಪಾಡಿಕೊಂಡು ಭೇಟಿ ಮಾಡಲು ಮನವಿ ಮಾಡುತ್ತಿದ್ದೇನೆ. ಅಭಿನಂದಿಸಲು ಯಾರೂ ಕೂಡಾ ಹಾರ, ತುರಾಯಿಗಳನ್ನು ತರಬಾರದು ಎಂದು ಕಳಕಳಿಯಿಂದ ಮನವಿ ಮಾಡಿದರು.
ಸಚಿವರಿಗೆ ಪಟಾಕಿ ಸಿಡಿಸಿ ಸ್ವಾಗತ: ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿ ಗೋಕಾಕ ನಗರಕ್ಕೆ ಗುರುವಾರದಂದು ರಾತ್ರಿ ಆಗಮಿಸಿದ್ದ ಸಚಿವ ರಮೇಶ ಜಾರಕಿಹೊಳಿ ಶುಕ್ರವಾರದಂದು ತಮ್ಮ ಸ್ವಗೃಹದಿಂದ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸುತ್ತಿದ್ದಂತೆ ಸಚಿವರನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಶಂಕರ ಧರೆನ್ನವರ, ಆನಂದ ಗೊಟಡಕಿ, ಶಿವಾನಂದ ಹಿರೇಮಠ, ಬಸವರಾಜ ಹಿರೇಮಠ, ರಾಜು ಹಿರೇಅಂಬಿಗೇರ, ಸತೀಶ ಮನ್ನಿಕೇರಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಅಭಿಮಾನಿಗಳು ಇದ್ದರು.

Related posts: