ಗೋಕಾಕ:ವನಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಧೀಶ ವಿಜಯಕುಮಾರ ಅಂದಾನಶೆಟ್ಟಿ ಚಾಲನೆ
ವನಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಧೀಶ ವಿಜಯಕುಮಾರ ಅಂದಾನಶೆಟ್ಟಿ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 5 :
ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಅರಣ್ಯ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಆಚರಣೆ ಕಾರ್ಯಕ್ರಮಕ್ಕೆ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಯಕುಮಾರ ಅಂದಾನಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ವಿಮಲ್ ನಂದಗಾಂವ, 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಸತೀಶ ಬಾಳಿ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಪ ಹುನ್ನೂರ, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಧೀಶ ವೀರೇಶಕುಮಾರ ಸಿ.ಕೆ. ಮತ್ತು 1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಕುಮಾರಿ ಶೋಭಾ, ವಕೀಲರ ಸಂಘದ ಅಧ್ಯಕ್ಷ ಉದಯಕುಮಾರ ಶಿಂಪಿ, ಉಪ-ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಎಸ್.ಜಿ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ಕೆ.ಎನ್.ವಣ್ಣೂರ ಹಾಗೂ ಉಪ-ವಲಯ ಅರಣ್ಯಾಧಿಕಾರಿ ಎಚ್.ಎಸ್.ಇಂಗಳಗಿ ಮೊದಲಾದವರು ಇದ್ದಾರೆ.