RNI NO. KARKAN/2006/27779|Sunday, June 28, 2026
You are here: Home » breaking news » ಗೋಕಾಕ:ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಜಾಗೃತಿ ಜಾಥಾ

ಗೋಕಾಕ:ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಜಾಗೃತಿ ಜಾಥಾ 

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಜಾಗೃತಿ ಜಾಥಾ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 12 :

 

ತಾಲೂಕಾಡಳಿತ, ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ನಗರಸಭೆ, ಪೋಲೀಸ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸಾಯಿಟಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಹಮ್ಮಿಕೊಂಡ ಅಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು ಶುಕ್ರವಾರದಂದು ಮಿನಿ ವಿಧಾನ ಸೌಧದ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿವಾಯ್ ಎಸ್‍ಪಿ ಪ್ರಭು ಡಿ.ಟಿ.ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಕಾರ್ಮಿಕ ನಿರೀಕ್ಷಕ ಪಿ.ಬಿ.ಮಾವರಕರ ಸೇರಿದಂತೆ ಅನೇಕರು ಇದ್ದರು.

Related posts: