RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ನಾಳೇ ಮಾಸ್ಕ್ ದಿನ’ ಆಚರಣೆ : ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ನಾಳೇ ಮಾಸ್ಕ್ ದಿನ’ ಆಚರಣೆ : ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ 

ನಾಳೇ ಮಾಸ್ಕ್ ದಿನ’ ಆಚರಣೆ : ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 17 :

 
ದಿ.18 ರಂದು ಬೆಳಿಗ್ಗೆ 10.15 ಗಂಟೆಗೆ ತಹಸೀಲ್ದಾರ್ ಕಚೇರಿ ಯಿಂದ ಮಾಸ್ಕ ಧರಿಸುವ ಕುರಿತು ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ತಿಳಿಸಿದ್ದಾರೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋವಿಡ್ – 19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು , ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆಯನ್ನು
ಹಮ್ಮಿಕೊಳ್ಳಲಾಗಿದೆ . ಈ ಪಾದಯಾತ್ರೆಯಲ್ಲಿ 50 ಜನರಿಗೆ ಮೀರಿ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಭಾಗವಹಿಸಬಾರದು. ಪಾದಯಾತ್ರೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳಬೇಕು .

ಜನ ಜಾಗೃತಿ ಪಾದಯಾತ್ರೆಯುದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ, ಆಗಾಗ ಸೋಪಿನಿಂದ ಕೈ ತೊಳೆಯುವುದು ಹಾಗೂ ಸ್ಯಾನಿಟೈಸರ್ ಬಳಸುವಿಕೆ ಕುರಿತು ಅರಿವನ್ನು ಮೂಡಿಸಲಾಗುವದು .ಈ ನಿಟ್ಟಿನಲ್ಲಿ ಎಲ್ಲಾ ಸಾರ್ವಜನಿಕರು, ಸಾಮಾಜಿಕ ಸಂಘಟನೆಗಳು, ಸಂಘ ಸಂಸ್ಥೆಗಳು ಕೋವಿಡ್ 19 ವೈರಾಣು ನಿಯಂತ್ರಿಸುವ ಹೋರಾಟದಲ್ಲಿ ಪೂರ್ಣವಾಗಿ ಪಾಲ್ಗೊಳ್ಳುವಂತೆ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಮನವಿ ಮಾಡಿಕೊಂಡಿದ್ದಾರೆ.

Related posts: