RNI NO. KARKAN/2006/27779|Tuesday, December 30, 2025
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ನೀರಾವರಿ ವಿಷಯವಾಗಿ ನಿಯೋಗದೊಂದಿಗೆ ಮಹಾ-ರಾಜ್ಯಕ್ಕೆ ಭೇಟಿ.

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ನೀರಾವರಿ ವಿಷಯವಾಗಿ ನಿಯೋಗದೊಂದಿಗೆ ಮಹಾ-ರಾಜ್ಯಕ್ಕೆ ಭೇಟಿ. 

ಸಚಿವ ರಮೇಶ ಜಾರಕಿಹೊಳಿ ನೀರಾವರಿ ವಿಷಯವಾಗಿ ನಿಯೋಗದೊಂದಿಗೆ ಮಹಾ-ರಾಜ್ಯಕ್ಕೆ ಭೇಟಿ.

 
ಪ್ರವಾಹದ ಮುಂಜಾಗೃತ ಕ್ರಮವಾಗಿ ಹಾಗೂ ನೀರಾವರಿ ಯೋಜನೆಗಳ ಸಮಸ್ಯೆಗಳ ಕುರಿತು ಚರ್ಚೆ

 

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 7 :
ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನೇತ್ರತ್ವದ ರಾಜ್ಯ ಸರ್ಕಾರದ ನಿಯೋಗವು ಪ್ರವಾಹ ಹಾಗೂ ನೀರಾವರಿ ಯೋಜನೆಗಳ ಕುರಿತು ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವ ಜಯಂತ ಪಾಟೀಲ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಈ ನಿಯೋಗವು ದಿ. 8 ರಂದು ಮುಂಜಾನೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 11 ಗಂಟೆಗೆ ಬೆಳಗಾವಿ ಆಗಮಿಸಿ ಅಲ್ಲಿಂದ 11.30 ಗಂಟೆಗೆ ಬೆಳಗಾವಿಯಿಂದ ವಿಮಾನದ ಮೂಲಕ ಮುಂಬೈಗೆ ತೆರಳಿ ಮಹಾರಾಷ್ಟ್ರದ ನೀರಾವರಿ ಸಚಿವರೊಂದಿಗೆ ಪ್ರವಾಹದ ಮುಂಜಾಗೃತ ಕ್ರಮವಾಗಿ ಹಾಗೂ ನೀರಾವರಿ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಅಲ್ಲಿಯೇ ವಾಸ್ತವ್ಯ ಮಾಡುವರು. ದಿ. 9 ರಂದು ಮುಂಜಾನೆ 11.30 ಗಂಟೆಗೆ ಮಹಾರಾಷ್ಟ್ರ ರಾಜ್ಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಯಂಕಾಲ 5 ಗಂಟೆಗೆ ಮುಂಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: