ಗೋಕಾಕ:ಕೌಜಲಗಿ ಗ್ರಾಮದ ಕೊರೋನಾ ಸೋಂಕಿತ ವ್ಯಕ್ತಿ ಸಾವು : ಡಾ .ಜಗದೀಶ ಜಿಂಗಿ ಮಾಹಿತಿ
ಕೌಜಲಗಿ ಗ್ರಾಮದ ಕೊರೋನಾ ಸೋಂಕಿತ ವ್ಯಕ್ತಿ ಸಾವು : ಡಾ .ಜಗದೀಶ ಜಿಂಗಿ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 13 :
ತಾಲೂಕಿನ ಕೌಜಲಗಿ ಗ್ರಾಮದ ಕೊರೋನಾ ಸೋಂಕಿತ ವ್ಯಕ್ತಿಯೋರ್ವ (49) ಇಂದು ಮೃತಪಟ್ಟಿದ್ದಾರೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಬಾನುವಾರವಷ್ಷೇ ಕೊರೋನಾ ಪಾಜಿಟಿವ ಬಂದ ಕೌಜಲಗಿ ಗ್ರಾಮದ ನಿವಾಸಿ ಸೋಮವಾರದಂದು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .
ಕಳೆದ ಹಲವಾರು ದಿನಗಳಿಂದ ಸೋಂಕಿತ ವ್ಯಕ್ತಿಯು ಪಿತ್ತಜನಕಾಂಗದ ತೊಂದರೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ . ಮೃತನ ಅಂತ್ಯ ಸಂಸ್ಕಾರವನ್ನು ಎಲ್ಲ ತರಹದ ಮುಂಜಾಗ್ರತೆಯನ್ನು ಕೈಗೊಂಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.