RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ದೆಹಲಿ ಪ್ರವಾಸ

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ದೆಹಲಿ ಪ್ರವಾಸ 

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ದೆಹಲಿ ಪ್ರವಾಸ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 14 :

 

ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ಪ್ರವಾಸ ಬೆಳೆಸಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ.
ದಿ. 14 ರಂದು ಸಂಜೆ4.45 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ದಿ.15ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ದಿ.16ರಂದು ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಎಂದು ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮಾರಂಗಪ್ಪನವರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: