RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಕೊರೋನಾ ಹರಡುವಿಕೆ ಹಿನ್ನೆಲೆ : ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಭೇಟಿ, ಪರಿಶೀಲನೆ

ಗೋಕಾಕ:ಕೊರೋನಾ ಹರಡುವಿಕೆ ಹಿನ್ನೆಲೆ : ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಭೇಟಿ, ಪರಿಶೀಲನೆ 

ಕೊರೋನಾ ಹರಡುವಿಕೆ ಹಿನ್ನೆಲೆ : ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಭೇಟಿ, ಪರಿಶೀಲನೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 18 :

 
ಗೋಕಾಕ ತಾಲೂಕಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೊರೋನಾ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಗರದಲ್ಲಿ ತೆರೆಯಲಾಗಿರುವ ಕೊರೋನಾ ಕೇರ್ ವಾರ್ಡಗಳಿಗೆ ಶನಿವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಮುಂಜಾಗ್ರತಾವಾಗಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಇರುಬೇಕು. ತಾಲೂಕಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಥವಾ ಬೇರೆ ಕಡೆಯಲ್ಲಿ ಒಂದೇ ಕಡೆ 100 ಹಾಸಿಗೆ ಉಳ್ಳ ಕೊರೋನಾ ವಾರ್ಡ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಮತ್ತು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಕೊರೋನಾ ಸಂಬಂಧಿಸಿದಂತೆ ಕೈಗೊಂಡ ಮುಂಜಾಗೃತ ಕ್ರಮ ಹಾಗೂ ವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು

ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ , ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು‌

Related posts: