ಗೋಕಾಕ:ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಬ್ಬರಿಗೆ ಕರೋನಾ ಸೋಂಕು ದೃಡ
ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಬ್ಬರಿಗೆ ಕರೋನಾ ಸೋಂಕು ದೃಡ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜು 28 :
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಬ್ಬರಿಗೆ ಕರೊನಾ ಸೋಂಕು ತಗುಲಿರುವದು ದೃಡಪಟ್ಟ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸೋಂಕಿತರ ಮನೆಯ ಸುತ್ತಲಿನ ಸುಮಾರು 50ಮೀ ಪ್ರದೇಶವನ್ನು ಮಂಗಳವಾರ ಜು.28 ರಂದು ಸೀಲ್‍ಡೌನ್ ಮಾಡಲಾಗಿದೆ.
ಗೋಕಾಕ ಕೋವಿಡ್ ಕೇರ್ ಸೆಂಟರ್‍ಗೆ ಕರೊನಾ ಸೋಂಕು ಲಕ್ಷಣವಿರುವ ವ್ಯಕ್ತಿಯನ್ನು ಸ್ಥಳಾಂತರಿಸಲಾಗುವದು. ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲ ಹಳ್ಳಿಗಳ ಸಮಸ್ತ ಜನತೆ ತಪ್ಪದೇ ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ಗೋಕಾಕ ತಾಲೂಕಿನ ಮಮದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಧರ ವಾಲಿಕಾರ ತಿಳಿಸಿದರು.
ಸಾರ್ವಜನಿಕರಲ್ಲಿ ಮನವಿ : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಮಸ್ತ ಜನತೆ ಸ್ವಯಂ ಪ್ರೇರತರಾಗಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಿ, ಸ್ಯಾನಿಟೈಜರ್ ಬಳಕೆ ಮಾಡುವುದರ ಜೋತೆಗೆ ಪ್ರತಿಯೊಬ್ಬರೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗೋಕಾಕ ತಾಲೂಕಾಡಳಿತ, ಆರೋಗ್ಯ ಇಲಾಖೆಯ ನಿರ್ದೇಶನಗಳನ್ನು ಸ್ಥಳೀಯರು ಕಡ್ಡಾಯವಾಗಿ ಪಾಲಿಸಿ, ಕರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿಯ ಸಾರ್ವಜನಿಕರು ಸಹಕರಿಸಬೇಕು ಎಂದು ಗ್ರಾಮಲೆಕ್ಕಾಧಿಕಾರಿ ಜೆ.ಎಮ್.ನದಾಫ್ ಅವರು ಮನವಿ ಮಾಡಿಕೊಂಡಿದ್ದಾರೆ.
ಗ್ರಾಮಲೆಕ್ಕಾಧಿಕಾರಿ ಜೆ.ಎಮ್.ನದಾಫ್, ಗ್ರಾಪಂ ಕಾರ್ಯದರ್ಶಿ ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಶಿವಾಜಿ ನೀಲಣ್ಣವರ, ಈರಣ್ಣ ದಂಡಿನ, ಸರೋಜಾ ಬೀಸನಾಳ, ಮಂಜು ನಾಯ್ಕರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಗ್ರಾಪಂ ಸಿಬ್ಬಂದಿ, ಇತರರು ಇದ್ದರು.