RNI NO. KARKAN/2006/27779|Tuesday, October 14, 2025
You are here: Home » breaking news » ಗೋಕಾಕ:ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ : ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ

ಗೋಕಾಕ:ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ : ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ 

ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ : ನಗರಸಭೆ ಸದಸ್ಯೆ ಲಕ್ಷ್ಮೀ ದೇಶನೂರ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು, 29 ;-

 
ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವದರಿಂದ ರೋಗ ಮುಕ್ತರಾಗಿ ಆರೋಗ್ಯವಂತ ಜೀವನವನ್ನು ನಡೆಸಲು ಸಾಧ್ಯವೆಂದು ನಗರಸಭೆ ಸದಸ್ಯೆ ಶ್ರೀಮತಿ ಲಕ್ಷ್ಮೀ ಬಸವರಾಜ ದೇಶನೂರ ಅವರು ತಿಳಿಸಿದ್ದಾರೆ.
ಬುಧವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ ಅವರು, ಇತ್ತೀಚೆಗೆ ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಸೊಳ್ಳೆಗಳಿಂದ ಈ ರೋಗ ಹರಡುತ್ತಿದ್ದು, ಸೊಳ್ಳೆಗಳನ್ನು ನಿಯಂತ್ರಿಸಲು ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿರಿ. ಕಾಯಿಸಿ ಆರಿಸಿದ ನೀರನ್ನು ಉಪಯೋಗಿಸಿರಿ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತ ಆಹಾರ ಪದಾರ್ಥಗಳನ್ನು ಸೇವಿಸಿ, ಇದರಿಂದ ಕೊರೋನಾ ವೈರಸ್‍ನಿಂದಲೂ ರಕ್ಷಣೆ ಪಡೆಯಬಹುದಾಗಿದ್ದು, ಜನತೆ ಜಾಗೃತರಾಗಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

Related posts: