RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಸೇವಾ ನಿವೃತ್ತಿ ಹೊಂದಿದ ಡಯಟ್ ಹಿರಿಯ ಉಪನ್ಯಾಸಕ ಎಂ.ಡಿ ಬೇಗ ಅವರಿಗೆ ಸತ್ಕಾರ

ಗೋಕಾಕ:ಸೇವಾ ನಿವೃತ್ತಿ ಹೊಂದಿದ ಡಯಟ್ ಹಿರಿಯ ಉಪನ್ಯಾಸಕ ಎಂ.ಡಿ ಬೇಗ ಅವರಿಗೆ ಸತ್ಕಾರ 

ಸೇವಾ ನಿವೃತ್ತಿ ಹೊಂದಿದ ಡಯಟ್ ಹಿರಿಯ ಉಪನ್ಯಾಸಕ ಎಂ.ಡಿ ಬೇಗ ಅವರಿಗೆ ಸತ್ಕಾರ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 1:

 

 

ಕಳೆದ 39 ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಜು 31 ರಂದು ಸೇವಾ ನಿವೃತ್ತಿ ಹೊಂದಿದ ಡಯಟ್ ಹಿರಿಯ ಉಪನ್ಯಾಸಕ ಎಂ.ಡಿ ಬೇಗ ಅವರಿಗೆ ಗೋಕಾಕ ತಾಲೂಕಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಶುಕ್ರವಾರದಂದು ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಆರ್.ಮುರಗೋಡ ಅವರು ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತ ಶಿಕ್ಷಣಾಧಿಕಾರಿ ಎ.ಎಸ್.ಜೋಡಗೇರಿ,
ಟಿ. ಬಿ.ಬಿಲ್ , ಐ.ಸಿ ಅಂಗಡಿ , ಶ್ರೀಮತಿ ಎಲ್.ಬಿ ಕಲ್ಲೂರ , ಸಾದಿಕ ಹಲ್ಯಾಳ , ಯಾಸೀನ ಮುಲ್ಲಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts: