RNI NO. KARKAN/2006/27779|Saturday, August 2, 2025
You are here: Home » breaking news » ಮೂಡಲಗಿ:ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ : ಈರಣ್ಣಾ ಕಡಾಡಿ

ಮೂಡಲಗಿ:ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ : ಈರಣ್ಣಾ ಕಡಾಡಿ 

ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ : ಈರಣ್ಣಾ ಕಡಾಡಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಅ 3 :

 

ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಕಿಸಾನ ಸಮ್ಮಾನ್ ಯೋಜನೆ ಸೇರಿದಂತೆ ಹಲವಾರು ಸಹಾಯ, ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ಸಾಮಾನ್ಯ ರೈತ ಕುಟುಂಬದಲ್ಲಿ ಜನಸಿದ ನಾನು ರೈತರ ಸಂಕಷ್ಟಗಳನ್ನು ಅರಿತಿದ್ದೇನೆ. ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ರಾಜ್ಯ ಬಿಜೆಪಿ ರೈತ ಮೋಚಾ ಅಧ್ಯಕ್ಷ ಈರಣ್ಣ ಕಡಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪರಪ್ಪ ಕಡಾಡಿ, ಶ್ರೀಶೈಲ ತುಪ್ಪದ, ಪ್ರಭು ಕಡಾಡಿ, ಕೃಷ್ಣಪ್ಪ ಮುಂಡಗಿನಾಳ, ಕಾಡೇಶ ಗೊರೋಶಿ, ಮಹಾದೇವ ಮದಬಾವಿ, ರಾಮಲಿಂಗ ಬಿ.ಪಾಟೀಲ, ಅಡಿವೆಪ್ಪ ಕುರಬೇಟ, ಪರಶುರಾಮ ಮಕ್ಕಳಗೇರಿ, ಪರಪ್ಪ ಮಳವಾಡ, ರಾಜಪ್ಪ ಗೋಸಬಾಳ, ಅರ್ಜುನ ಚಿಕ್ಕೋಡಿ, ಶಂಕರ ಕಡಾಡಿ, ಸಹದೇವ ಹೆಬ್ಬಾಳ, ಸ್ಥಳೀಯ ರೈತರು, ಹಿರಿಯ ನಾಗರಿಕರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

Related posts: