ಗೋಕಾಕ:ಅಗಸ್ಟ್ 24ರೊಳಗಾಗಿ ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ದಾಖಲಿಸಬೇಕು : ಎಂ.ಎಂ.ನದಾಫ
ಅಗಸ್ಟ್ 24ರೊಳಗಾಗಿ ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ದಾಖಲಿಸಬೇಕು : ಎಂ.ಎಂ.ನದಾಫ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 13 :
ನಗರದ ಮಿನಿ ವಿಧಾನ ಸೌಧದಲ್ಲಿ ಕೃಷಿ ಕಂದಾಯ ಮತ್ತು ತೋಟಗಾರಿಕಾ ಇಲಾಖೆಗಳ ಸಹಯೋಗದಲ್ಲಿ 2020-21 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮ ಜರುಗಿತು.
ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದಾಫ ಅವರು ಮಾತನಾಡಿ ಸರಕಾರದ ಆದೇಶದ ಅನುಸಾರ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರ ದಾಖಲಿಸಲು “ರೈತರ ಬೆಳೆ ಸಮೀಕ್ಷೆ-2020-21” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನಲೊಡ ಮಾಡಿಕೊಂಡು ಅಗಸ್ಟ್ 24ರೊಳಗಾಗಿ ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ದಾಖಲಿಸಬೇಕು.
ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡಿ ಬೆಳೆ ಸಮೀಕ್ಷೆ ಕುರಿತು ಗ್ರಾಮ ಪಂಚಾಯಿತಿ ಮತ್ತು ಕ್ಷೇತ್ರ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಗದಿತ ಅವಧಿಯಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಅಧಿಕಾರಿ ಶಂಕರ ಹಳದಮನಿ ಅವರು ಅಧಿಕಾರಿಗಳಿಗೆ ಬೆಳೆ ವಿವರವನ್ನು ದಾಖಲಿಸುವ ಬಗ್ಗೆ ತರಬೇತಿ ನೀಡಿದರು.
ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಎಮ್.ಎಲ್.ಜನಮಟ್ಟಿ ಕೃಷಿ ಅಧಿಕಾರಿಗಳಾದ ಪರಸಪ್ಪ ಹುಲಗಬಾಳ, ವಿದ್ಯಾ ಪಾಲಕಿ, ಕೃಷಿ, ಕಂದಾಯ, ತೋಟಗಾರಿಕಾ ಅಧಿಕಾರಿಗಳು ತರಬೇತಿಯಲ್ಲಿ ಇದ್ದರು.