ಬೆಳಗಾವಿ:ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ : ಮಧ್ಯಸ್ಥಿಕೆ ವಹಿಸುವಂತೆ ಕರವೇ ಮನವಿ
ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ : ಮಧ್ಯಸ್ಥಿಕೆ ವಹಿಸುವಂತೆ ಕರವೇ ಮನವಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಅ 24 :
ಇಲ್ಲಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆಸ್ಥಿಕೆ ವಹಿಸಃವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿದರು.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಹಲವು ವರ್ಷಗಳಿಂದ ಅಭಿಮಾನಿಗಳ ಒತ್ತಾಯವಾಗಿದೆ.
ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಲಾಗಿದ್ದರು ಸಹ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶ ಮಾಡಬೇಕು. ಪ್ರತಿಮೆ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡುವಂತೆ ಇಂದು ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ವೇಳೆಯಲ್ಲಿ ಕರವೇ ರಾಜ್ಯ ಸಂಚಾಲಕ ಮಹದೇವ ತಳವಾರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗುರನ್ನವರ ಸೇರಿದಂತೆ ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

