ಬೆಳಗಾವಿ:ರಾಯಣ್ಣನ ಪ್ರತಿಮಯನ್ನು ಶೀಘ್ರ ಪ್ರತಿಷ್ಠಾಪಿಸುವಂತೆ ಮುಖ್ಯಮಂತ್ರಿಗಳಿಗೆ ಕರವೇ ಮನವಿ
ರಾಯಣ್ಣನ ಪ್ರತಿಮಯನ್ನು ಶೀಘ್ರ ಪ್ರತಿಷ್ಠಾಪಿಸುವಂತೆ ಮುಖ್ಯಮಂತ್ರಿಗಳಿಗೆ ಕರವೇ ಮನವಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಅ 25 :
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಕರವೇ ಬೆಳಗಾವಿ ಜಿಲ್ಲಾ ಘಟಕದಿಂದ ಮಂಗಳವಾರದಂದು ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು
ಪ್ರವಾಹ ಪರಿಸ್ಥಿಯನ್ನು ಅವಲೋಕಿಸಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಕರವೇ ಕಾರ್ಯಕರ್ತರು ಅತೀ ಶೀಘ್ರದಲ್ಲಿ ಪೀರನವಾಡಿಯ ಹಳೆ ಸ್ಥಳದಲ್ಲೇ ವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಂಬಂಧ ಪಟ್ಟ ಇಲಾಖೆಗೆ ಹಾಗೂ ಜಿಲ್ಲಾಡಳಿತಕ್ಕೆ ಸೂಕ್ತ ಸಲಹೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು
ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ , ಉಪಾಧ್ಯಕ್ಷ ಸುರೇಶ ಗವನ್ನವರ ಸೇರಿದಂತೆ ಇತರರು ಇದ್ದರು