RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವುದು ಸರಿಯಲ್ಲ : ಕರವೇ ಗಜಸೇನೆ ಅಧ್ಯಕ್ಷ ಪವನ

ಗೋಕಾಕ:ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವುದು ಸರಿಯಲ್ಲ : ಕರವೇ ಗಜಸೇನೆ ಅಧ್ಯಕ್ಷ ಪವನ 

ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವುದು ಸರಿಯಲ್ಲ : ಕರವೇ ಗಜಸೇನೆ ಅಧ್ಯಕ್ಷ ಪವನ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 14 :

 

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರು ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿಂಗಪುರ ತಿಳಿಸಿದ್ದಾರೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ. ಈ ವಿಚಾರವಾಗಿ ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

Related posts: