ಗೋಕಾಕ:ಲಿಂಗಾಯತ ನಮೂದಿಸಿ ಜಾತ್ರಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ದಿ. 18 ರಂದು ಪ್ರತಿಭಟನೆ
ಲಿಂಗಾಯತ ನಮೂದಿಸಿ ಜಾತ್ರಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ದಿ. 18 ರಂದು ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 15 :
ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಲಿಂಗಾಯತ ನಮೂದಿಸಿ ಜಾತ್ರಿ ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ದಿ. 18 ರಂದು ಮುಂಜಾನೆ 11 ಗಂಟೆಗೆ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಇಲ್ಲಿಯ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಶ್ರೀಗಳು ಸನ್-2002ರ ವರೆಗೆ ಕಂದಾಯ ಇಲಾಖೆಯವರು ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದರು. ಈಗ ವೀರಶೈವ-ಲಿಂಗಾಯತ ಎಂದು ಪ್ರಮಾಣ ಪತ್ರ ನೀಡಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಶುಕ್ರವಾರದಂದು ಮುಂಜಾನೆ 11 ಗಂಟೆಗೆ ನಗರದ ಬಸವೇಶ್ವರ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೂ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶೀಲದಾರರಿಗೆ ಮನವಿ ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದವರು ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.