ಗೋಕಾಕ:ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ
ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 26 :
ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ರಸ್ತೆಗಳ ಸುಧಾರಣೆಗಾಗಿ ಅಗತ್ಯವಿರುವ ವಿವಿಧ ಇಲಾಖೆಗಳ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆಂದು ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ನೀರಾವರಿ ನಿಗಮದ ಅನುದಾನದಲ್ಲಿ ಮಂಜೂರಾದ 1.25 ಕೋಟಿ ರೂ. ವೆಚ್ಚದ ರಾಮಲಿಂಗೇಶ್ವರ ಏತ ನೀರಾವರಿಯ ಡೆಲಿವರಿ ಛೇಂಬರ್‍ಗೆ ಹೋಗುವ ಅಪ್ರೋಚ್ ರಸ್ತೆ ಅಭಿವೃದ್ಧಿಪಡಿಸುವ ರಸ್ತೆ ಕಾಮಗಾರಿ ಆರಂಭಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಡೀ ಕ್ಷೇತ್ರದಲ್ಲಿ ಲೋಕೋಪಯೋಗಿ ಮತ್ತು ಜಲಸಂಪನ್ಮೂಲ ಇಲಾಖೆಗಳ ಆರ್ಥಿಕ ನೆರವಿನಿಂದ ಹದಗೆಟ್ಟಿರುವ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ. ಇದಕ್ಕೆ ಶಾಸಕರ ಜನಪರ ಕಾಳಜಿ ಕಾರಣವೆಂದು ಹೇಳಿದರು.
ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಲೇ ಕೌಜಲಗಿ ಭಾಗದ ರೈತರಿಗೆ ವರದಾನವಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಭರದಿಂದ ಸಾಗುತ್ತಿದೆ. ರೈತರು ಸಹ ಕಾಮಗಾರಿ ಆರಂಭವಾಗಿರುವುದನ್ನು ಕಂಡು ಖುಷಿ ಪಡುತ್ತಿದ್ದಾರೆ. ಈ ಯೋಜನೆ ವ್ಯಾಪ್ತಿಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಸರ್ಕಾರದಿಂದ ಅಗತ್ಯವಿರುವ ಪರಿಹಾರ ಕೊಡಿಸುವುದಾಗಿ ಈಗಾಗಲೇ ಶಾಸಕರು ರೈತರಿಗೆ ವಾಗ್ದಾನ ಮಾಡಿದ್ದಾರೆ. ಇದರ ಸಮೀಕ್ಷೆ ಕಾರ್ಯವೂ ಸಹ ನಡೆಯುತ್ತಿದೆ. ಆದ್ದರಿಂದ ಭೂಮಿ ಕಳೆದುಕೊಳ್ಳುವ ರೈತರು ಆತಂಕಪಡುವ ಅಗತ್ಯವಿಲ್ಲವೆಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ರವಿ ಪರುಶೆಟ್ಟಿ, ತಾಪಂ ಸದಸ್ಯ ಶಾಂತಪ್ಪ ಹಿರೇಮೇತ್ರಿ, ಎಸ್.ಬಿ. ಲೋಕನ್ನವರ, ಅಡಿವೆಪ್ಪ ಅಳಗೋಡಿ, ಬಾಳಪ್ಪ ಗೌಡರ, ಎ.ಎಲ್. ದಳವಾಯಿ, ಭೀಮಶೆಪ್ಪ ಅಳಗೋಡಿ, ರಾಯಪ್ಪ ಬಳೋಲದಾರ, ಎಸ್‍ಓ ರಾಘವೇಂದ್ರ ಹಕಾಟೆ, ಗುತ್ತಿಗೆದಾರ ಬಸವರಾಜ ಕಸ್ತೂರಿ ಮುಂತಾದವರು ಉಪಸ್ಥಿತರಿದ್ದರು.
ಶಾಸಕರ ಪರವಾಗಿ ಎನ್‍ಎಸ್‍ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ ಅವರು ಈ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.