ಗೋಕಾಕ:ತಾಲೂಕಾಡಳಿತ ವತಿಯಿಂದ ವಾಲ್ಮೀಕಿ ಜಯಂತಿ ಅಚರಣೆ
ತಾಲೂಕಾಡಳಿತ ವತಿಯಿಂದ ವಾಲ್ಮೀಕಿ ಜಯಂತಿ ಅಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 31 :
ತಾಲೂಕಾಡಳಿತ , ತಾಲೂಕ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ವಾಲ್ಮೀಕಿ ಜಯಂತಿಯನ್ನು ಶನಿವಾರದಂದು ಆಚರಿಸಲಾಯಿತು
ಜಯಂತಿಯ ಅಂಗವಾಗಿ ತಹಶೀಲ್ದಾರ್ ಕಛೇರಿ , ವಾಲ್ಮೀಕಿ ವೃತ್ತ ಹಾಗೂ ವಾಲ್ಮೀಕಿ ಗುಡಿಯಲ್ಲಿ ಪೂಜೆ ಸಲ್ಲಿಸಲಾಯಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಿ.ಜೆ ಮಹಾತ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ಸಮಾಜ ಕಲ್ಯಾಣ ಅಧಿಕಾರಿ ಎಸ್.ಬಿ ಕಲ್ಲಪನವರ , ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಜಯಶ್ರೀ ಗೋಟೂರೆ , ಪೌರಾಯುಕ್ತ ಶಿವಾನಂದ ಹಿರೇಮಠ , ಬಿಇಒ ಜಿ.ಬಿ.ಬಳಗಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು , ಸಮಾಜದ ಮುಖಂಡರುಗಳು ,ಯುವಕ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.