ಗೋಕಾಕ:ಬೆಟಗೇರಿಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ
ಬೆಟಗೇರಿಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

ಬೆಟಗೇರಿ ನ 14 : ಬೆಳಗಾವಿ ಜಿಪಂ ಮತ್ತು ಗೋಕಾಕ ತಾಲೂಕಾ ಪಂಚಾಯತಿ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಇಲ್ಲಿಯ ಗ್ರಾಪಂ ಕಾರ್ಯಾಲಯದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದಡಿಯಲ್ಲಿ ಶನಿವಾರ ನ.14 ರಂದು ಮಕ್ಕಳ ಹಕ್ಕುಗಳ ಗ್ರಾಮ ಸಭೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗೌಡಪ್ಪ ಮಾಳೇದ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು.
ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ, ಉಭಯ ಪ್ರಾಥಮಿಕ ಕನ್ನಡ ಶಾಲೆಗಳ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಬಸವರಾಜ ಪಣದಿ, ಸುರೇಶ ಬಾಣಸಿ, ವಿಠಲ ಚಂದರಗಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ, ಮಕ್ಕಳು ಇದ್ದರು.
