ಗೋಕಾಕ:ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ
ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :
ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರದಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಂ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಈ ಅವಿರೋಧವಾಗಿ ಆಯ್ಕೆ ನಡೆದಿದೆ.
ಸಕ್ಕರೆ ಸಚಿವ ಶಿವರಾಂ ಹೆಬ್ಬಾರ ಅವರು ಈ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷರ ರಾಜೀನಾಮೆಯಿಂದಾಗಿ ಈ ಸ್ಥಾನ ತೆರವಾಗಿತ್ತು.
ಸಚಿವ ಹೆಬ್ಬಾರ ಅವರು ನೂತನ ಉಪಾಧ್ಯಕ್ಷ ಅಶೋಕ ಪಾಟೀಲ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಆಡಳಿತ ಮಂಡಳಿಯ ಸದಸ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.