RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೆಡಿಎಸ್ ಮುಖಂಡ ಅಶೋಕ

ಗೋಕಾಕ:ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೆಡಿಎಸ್ ಮುಖಂಡ ಅಶೋಕ 

ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೆಡಿಎಸ್ ಮುಖಂಡ ಅಶೋಕ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 6 :

 

ಕಳೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ವರ್ಧಿಸಿ ಸೋಲನುಭವಿಸಿದ್ದ ಅಶೋಕ ಪೂಜಾರಿ ಅವರು ರವಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹಮ್ಮಿಕೊಂಡ ಸ್ಮಶಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಪಕ್ಕದಲ್ಲಿ ಕುಳಿತು ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ವರ್ಧಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರು ಇತ್ತೀಚೆಗೆ ತೆರೆಮರೆಯಲ್ಲಿ ಸಹೋದರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲಿಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 2023 ಸಾಲಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸಕ್ಕೆ ಅಭ್ಯರ್ಥಿ ಆಗುತ್ತಾರಾ ಎಂಬ ಗುಮಾನಿಗಳು ಹಬ್ಬಿರುವ ಸಂದರ್ಭದಲ್ಲಿ ಅಶೋಕ ಪೂಜಾರಿ ಅವರು ಸತೀಶ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿ ವೇದಿಕೆ ಹಂಚಿಕೊಂಡಿದ್ದು ಇದಕ್ಕೆ ಪುಷ್ಠಿ ನೀಡುವಂತಿತ್ತು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Related posts: