RNI NO. KARKAN/2006/27779|Tuesday, March 24, 2026
You are here: Home » breaking news » ಗೋಕಾಕ:ಗ್ರಾಮ ಪಂಚಾಯತ್ ಮತ ಎಣಿಕೆಗೆ ಸಕಲ ಸಿದ್ಧತೆ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ಗ್ರಾಮ ಪಂಚಾಯತ್ ಮತ ಎಣಿಕೆಗೆ ಸಕಲ ಸಿದ್ಧತೆ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ 

ಗ್ರಾಮ ಪಂಚಾಯತ್ ಮತ ಎಣಿಕೆಗೆ ಸಕಲ ಸಿದ್ಧತೆ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 29 :

 

ತಾಲೂಕಿನ 32 ಗ್ರಾಮ ಪಂಚಾಯತಿಗಳ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಮತ ಎಣಿಕೆ ಕಾರ್ಯವು ನಾಳೆ ಡಿ 30 ರಂದು ನಗರದ ಸರಕಾರಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 7 ಘಂಟೆಯಿಂದ ನಡೆಯಲಿದೆ ಎಂದು ತಾಲೂಕಾ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ತಿಳಿಸಿದ್ದಾರೆ

ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು ಮತ ಎಣಿಕೆಗಾಗಿ 12 ಕೊಠಡಿಗಳಲ್ಲಿ 50 ಕ್ಕೂ ಹೆಚ್ಚು ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, 69 ಮತ ಎಣಿಕೆ ಮೇಲ್ವಿಚಾರಕರು ಸೇರಿದಂತೆ 138 ಮತ ಎಣಿಕೆ ಸಿಬ್ಬಂದಿಗಳು ಮತ ಎಣಿಕೆ ಮಾಡಲಿದ್ದಾರೆ.
ಗೋಕಾಕ ಡಿ.ವಾಯ್.ಎಸ್.ಪಿ ಅವರೊಂದಿಗೆ ಭದ್ರತೆ ಕುರಿತು ಚರ್ಚಿಸಲಾಗಿದ್ದು, 100 ಹೆಚ್ಚು ಪೊಲೀಸ ಸಿಬ್ಬಂದಿಗಳು ಈ ಕಾರ್ಯಕ್ಕೆ ನಿಯೋಜಿಸಲಾಗುವುದು.
ಮತ ಎಣಿಕೆ ಕೇಂದ್ರಗಳಲ್ಲಿ ಕೊರೋನಾ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ತಹಶೀಲ್ದಾರ ಹಾಗೂ ತಾಲೂಕಾ ಚುನಾವಣಾಧಿಕಾರಿ ಪ್ರಕಾಶ ಹೋಳೆಪ್ಪಗೋಳ ತಿಳಿಸಿದ್ದಾರೆ.

Related posts: