RNI NO. KARKAN/2006/27779|Tuesday, August 5, 2025
You are here: Home » breaking news » ಗೋಕಾಕ:ಬಜೆಟ್ ನಂತರ ಗೋಕಾಕ ನೂತನ ಜಿಲ್ಲೆಗಾಗಿ ಪ್ರಾಮಾಣಿಕ ಪ್ರಯತ್ನ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ:ಬಜೆಟ್ ನಂತರ ಗೋಕಾಕ ನೂತನ ಜಿಲ್ಲೆಗಾಗಿ ಪ್ರಾಮಾಣಿಕ ಪ್ರಯತ್ನ : ಸಚಿವ ರಮೇಶ ಜಾರಕಿಹೊಳಿ 

ಬಜೆಟ್ ನಂತರ ಗೋಕಾಕ ನೂತನ ಜಿಲ್ಲೆಗಾಗಿ ಪ್ರಾಮಾಣಿಕ ಪ್ರಯತ್ನ : ಸಚಿವ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 4 :

 

ಬಜೆಟ್ ನಂತರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಗೋಕಾಕ ನೂತನ ಜಿಲ್ಲೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸೋಮವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಗೋಕಾಕ ಜಿಲ್ಲಾ ಹೋರಾಟ ಸಮಿತಿಯವರು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಗೋಕಾಕ ಜಿಲ್ಲೆ ರಚನೆಗಾಗಿ ಮುಖ್ಯಮಂತ್ರಿಗಳನ್ನು ಎಲ್ಲರೂ ಭೇಟಿ ಮಾಡೋಣ, ಪಕ್ಷಾತೀತವಾಗಿ ನಿಯೋಗವೊಂದನ್ನು ಬೆಂಗಳೂರಿಗೆ ಕರೆದುಕೊಂಡು ಹೊಸ ಜಿಲ್ಲೆಗಾಗಿ ನಮ್ಮ ಬೇಡಿಕೆಯನ್ನು ಮಂಡಿಸೋಣವೆಂದು ಹೇಳಿದರು.
ಕಳೆದ 4ದಶಕಗಳಿಂದ ಗೋಕಾಕ ಜಿಲ್ಲಾ ರಚನೆಗಾಗಿ ಮಾಡುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ. ಗೋಕಾಕ ಜಿಲ್ಲೆ ರಚನೆಗೆ ಕೆಲವೊಂದು ಅಡಚಣೆಗಳು ಬಂದಿವೆ. ಈ ಹಿಂದೆಯೇ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲಾ ರಚನೆಗೆ ಸರ್ಕಾರ ಗೆಜೆಟ್ ಹೊರಡಿಸಿತ್ತು. ಆದರೆ ಕೆಲವು ತಾಲೂಕುಗಳ ಜನರ ಅಸಹಕಾರದಿಂದ ಜಿಲ್ಲೆ ರಚನೆ ನೆನೆಗುದಿಗೆ ಬಿದ್ದಿದೆ ಎಂದು ತಿಳಿಸಿದರು.
ಕೋವಿಡ್ ಕಾರಣದಿಂದ ಸರ್ಕಾರ ಆರ್ಥಿಕವಾಗಿ ಇನ್ನೂ ಚೇತರಿಸಿಕೊಳ್ಳಬೇಕಾಗಿದೆ. ಹೊಸ ಜಿಲ್ಲೆ ರಚನೆಗೆ ಆರ್ಥಿಕ ಸಂಪನ್ಮೂಲಗಳ ಕ್ರೋಢಿಕರಣ ಅವಶ್ಯವಾಗಿದೆ. ಆದಾಗ್ಯೂ ಬಜೆಟ್ ಬಳಿಕ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗೋಕಾಕ ಹೊಸ ಜಿಲ್ಲೆಗಾಗಿ ಮನವಿ ಮಾಡಿಕೊಳ್ಳಲಾಗುವದೆಂದು ಅವರು ಹೇಳಿದರು.
ಗೋಕಾಕ ಜಿಲ್ಲಾ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳು ಮಾತನಾಡಿ
ಹಲವಾರು ವರ್ಷಗಳಿಂದ ಗೋಕಾಕ ಜಿಲ್ಲೆಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಸರಕಾರದ ಮಟ್ಟದಲ್ಲಿ ಗೋಕಾಕ ಜಿಲ್ಲೆ ಮಾಡಲು ಶ್ರಮಿಸಿ ಆದಷ್ಟು ಬೇಗ ಗೋಕಾಕ ನೂತನ ಜಿಲ್ಲೆ ಮಾಡಲು ಸಚಿವರು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡರುಗಳಾದ ಬಸಗೌಡ ಪಾಟೀಲ, ಡಾ. ರಾಜೇಂದ್ರ ಸಣ್ಣಕ್ಕಿ, ಎಂ.ಆರ್.ಭೋವಿ, ವಕೀಲರ ಸಂಘದ ಅಧ್ಯಕ್ಷ ಉದಯ ಶಿಂಪಿ, ನ್ಯಾಯವಾದಿಗಳಾದ ಬಿ.ಆರ್ ಕೊಪ್ಪ, ಎಸ್.ವ್ಹಿ ದೇಮಶೆಟ್ಟಿ, ಸಿ.ಡಿ ಹುಕ್ಕೇರಿ, ಎಸ್.ಎಸ್.ಪಾಟೀಲ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ನೀಲಕಂಠ ಕಪ್ಪಲಗುದ್ದಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಸಂತೋಷ ಖಂಡ್ರಿ , ಕಿರಣ ಢಮಾಮಗರ ಸೇರಿದಂತೆ ವಿವಿಧ ಸಂಘಟನೆ ಪ್ರಮುಖರು ಇದ್ದರು.

Related posts: