RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ

ಗೋಕಾಕ:ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ 

ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 16 :

 

ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು.
ಗೋಕಾಕ ನಗರವು ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಾಹಿತ್ಯಿಕವಾಗಿ, ಸಮಾಜಿಕವಾಗಿ , ಶೈಕ್ಷಣಿಕವಾಗಿ ಗೋಕಾಕ ನಗರದಲ್ಲಿ ದಿನಾಲೂ ಹತ್ತು ಹಲವಾರು ಕಾರ್ಯಕ್ರಮಗಳು ಜರಗುತ್ತಿವೆ. ಆದರೆ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರಿಯಾದ ಭವನದ ವ್ಯವಸ್ಥೆ ಇಲ್ಲವಾಗಿದೆ ಇದರಿಂದ ನಗರದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಘಟಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಸೂಕ್ಷ್ಮವಾಗಿ ಪರಿಗಣಿಸಿ ಆದಷ್ಟು ಬೇಗ ಗೋಕಾಕ ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಜಾಗವನ್ನು ಮಂಜೂರು ಮಾಡಿ ಆ ಜಾಗದಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಅನುವುಮಾಡಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಬಸವರಾಜ ಬಂಡಿವಡ್ಡರ, ಅಶೋಕ ಬಂಡಿವಡ್ಡರ, ಮುಗುಟ ಪೈಲವಾನ, ರಾಮ ಕುಡ್ಡೇಮ್ಮಿ, ರಮೇಶ ಕಮತಿ, ಯಲ್ಲಪ್ಪ ಧರ್ಮಟ್ಟಿ, ಸೇರಿದಂತೆ ಇತರರು ಇದ್ದರು

 

Related posts: