ಘಟಪ್ರಭಾ:ಅನಿಸಿಕೆ ಅಭಿಪ್ರಾಯ ಮಂಡಿಸಿ : ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ
ಅನಿಸಿಕೆ ಅಭಿಪ್ರಾಯ ಮಂಡಿಸಿ : ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 22 :
ಕರ್ನಾಟಕ ಸರ್ಕಾರದ ದೇವರಾಜ ಅರಸು ಸಂಶೋಧನಾ ಸಂಸ್ಥೆ ಹಾಗೂ ಸಮಾಜ ಶಾಸ್ತ್ರ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಪ್ಪಾರ ಸಮಾಜದ ಎ.ಸ್ಟಿ ಸೇರ್ಪಡೆಗಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಶ್ರೀ ಭಗೀರಥ ಪೀಠದಲ್ಲಿ ದಿ.24 ರಂದು ನಡೆಯುತ್ತಿರುವ ಉಪ್ಪಾರರ ಕುಲ ಶಾಸ್ತ್ರಿಯ ಅಧ್ಯಯನದ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಮಂಡಿಸಲು ನ್ಯಾಯವಾದಿ ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.